
ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್ ಆವರಣದಲ್ಲಿ ಪ್ರತಿಭಟನೆಯ ನೆಪದಲ್ಲಿ ಗೊಂದಲ ಸೃಷ್ಟಿಸಿದ ಆರೋಪದ ಮೇಲೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ದೂರು ದಾಖಲಾಗಿದೆ.
ದೆಹಲಿ ಸಿಖ್ ಗುರುದ್ವಾರ ಪ್ರಬಂಧಕ್ ಕಮಿಟಿ ಅಧ್ಯಕ್ಷ ಹರ್ಮೀತ್ ಸಿಂಗ್ ಕಲ್ಕಾ ಅವರು ದೆಹಲಿ ಪೊಲೀಸರಿಗೆ ಈ ಸಂಬಂಧ ಅಧಿಕೃತ ದೂರು ನೀಡಿದ್ದಾರೆ.
ಆಪ್ ಕಾರ್ಯಕರ್ತರು ಧಾರ್ಮಿಕ ಸ್ಥಳವನ್ನು ರಾಜಕೀಯ ಲಾಭಕ್ಕಾಗಿ ಬಳಸಿ ಘೋಷಣೆಗಳನ್ನು ಕೂಗಿದ್ದಾರೆ ಹಾಗೂ ಬೂಟುಗಳನ್ನು ಧರಿಸಿ ಬಂದಂತೆ ಸುಳ್ಳು ವಿಡಿಯೋ ಹಂಚಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.