
ಜಾಗತಿಕ ತೈಲ ಸಾರಿಗೆಯ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಂದಿನ 7 ದಿನಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲು ಇರಾನ್ ಪ್ರಸ್ತಾಪಿಸಿದೆ.
ಈ ಪ್ರಸ್ತಾಪಕ್ಕೆ ಪ್ರತಿಯಾಗಿ, ಅಮೆರಿಕ ಸರ್ಕಾರವು ತನ್ನ ಸೇನಾ ಒತ್ತಡವನ್ನು ಕಡಿಮೆಗೊಳಿಸಬೇಕು ಮತ್ತು ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನವನ್ನು ತೆರವುಗೊಳಿಸಬೇಕು ಎಂಬ ಪ್ರಮುಖ ಷರತ್ತನ್ನು ಇರಾನ್ ವಿಧಿಸಿದೆ.
ಇರಾನ್‌ನ ಈ ಧನಾತ್ಮಕ ಸುಳಿವು ಹೊರಬೀಳುತ್ತಿದ್ದಂತೆಯೇ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಸಮಾಧಾನದ ವಾತಾವರಣ ನಿರ್ಮಾಣವಾಗಿದ್ದು, ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇಕಡಾ 3.5ಕ್ಕಿಂತಲೂ ಹೆಚ್ಚು ಇಳಿಕೆ ಕಂಡಿದೆ.