Health & Environment
ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್ ಉಪಾಧ್ಯಾಯ ಪತ್ತೆಗೆ ಶೋಧ

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್ ಉಪಾಧ್ಯಾಯ ಪತ್ತೆಗೆ ಶೋಧ

tv9kannada1h
THE BRIEF
1

ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ಬಂದು ನಾಲ್ಕು ದಿನಗಳ ಹಿಂದೆ ನಾಪತ್ತೆಯಾದ ಉತ್ತರ ಪ್ರದೇಶದ ಟೆಕ್ಕಿ ಅದ್ವೈತ್ ಉಪಾಧ್ಯಾಯ ಪತ್ತೆಗೆ ಶೋಧ ಕಾರ್ಯ ತೀವ್ರಗೊಂಡಿದೆ.

2

ಇಂದಿನ ಕಾರ್ಯಾಚರಣೆಯಲ್ಲಿ ಬೆಟ್ಟದ ತುದಿಯಲ್ಲಿ ಚಾರಣಿಗರು ತೆಗೆದ ಫೋಟೋದಲ್ಲಿ ಅದ್ವೈತ್ ಕಾಣಿಸಿಕೊಂಡಿದ್ದು, ಎನ್‌ಡಿಆರ್‌ಎಫ್ ಮತ್ತು ಅರಣ್ಯ ಸಿಬ್ಬಂದಿ ಡ್ರೋನ್ ಬಳಸಿ ಹುಡುಕಾಟ ನಡೆಸುತ್ತಿದ್ದಾರೆ.

3

ಧಾರಾಕಾರ ಮಳೆಯ ನಡುವೆಯೂ ನೆಲಮಂಗಲ ಡಿವೈಸ್​ಪಿ ಉಮಾರಾಣಿ ನೇತೃತ್ವದಲ್ಲಿ ತಂಡವು ಬೆಟ್ಟದ ಕಡಿದಾದ ಪ್ರದೇಶಗಳಲ್ಲಿ ಶೋಧ ನಡೆಸುತ್ತಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.