
ನೆಲಮಂಗಲದ ಅರಿಶಿನಕುಂಟೆಯಲ್ಲಿ ಬಸ್ ಹತ್ತಲು ಪ್ರಯತ್ನಿಸುತ್ತಿದ್ದ ಭಿಕ್ಷುಕನಿಗೆ ಒದ್ದ ಬಿಎಂಟಿಸಿ ನಿರ್ವಾಹಕ ಕೃಷ್ಣಮೂರ್ತಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ದ್ವಿಚಕ್ರ ವಾಹನ ಸವಾರರೊಬ್ಬರ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾದ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಿರ್ವಾಹಕರ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಘಟನೆಯ ಕುರಿತು ಇಲಾಖಾ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ಪ್ರಯಾಣಿಕರೊಂದಿಗೆ ಗೌರವಯುತವಾಗಿ ವರ್ತಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.