
ಮೆಟಾ ಸಂಸ್ಥೆಯು 8,000ಕ್ಕೂ ಅಧಿಕ ಉದ್ಯೋಗಿಗಳನ್ನು ವಜಾಗೊಳಿಸಿದ ಬೆನ್ನಲ್ಲೇ, ಸಿಇಒ ಮಾರ್ಕ್ ಜುಕರ್‌ಬರ್ಗ್ ಕೃತಕ ಬುದ್ಧಿಮತ್ತೆ (AI) ಉದ್ಯೋಗಗಳನ್ನು ಕಸಿದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಎಐ ತಂತ್ರಜ್ಞಾನವು ಹಳೆಯ ಕೆಲಸಗಳನ್ನು ಸ್ವಯಂಚಾಲಿತಗೊಳಿಸಿದರೂ, ಹೊಸ ರೀತಿಯ ಸಂಪನ್ಮೂಲಗಳನ್ನು ಸೃಷ್ಟಿಸುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಜುಕರ್‌ಬರ್ಗ್ ಅವರ ಈ ಹೇಳಿಕೆಗೆ ಸಂಸ್ಥೆಯ ಮಾಜಿ ಉದ್ಯೋಗಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಎಐ ಕಾರಣದಿಂದಲೇ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದನ್ನು ಪ್ರಶ್ನಿಸಿದ್ದಾರೆ.