
ಜಾರ್ಖಂಡ್ನಲ್ಲಿ ಪರೀಕ್ಷಾ ಪಾರದರ್ಶಕತೆ ಮತ್ತು ಉದ್ಯೋಗಾವಕಾಶಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ.
ಜಾರ್ಖಂಡ್ನಲ್ಲಿ ಜೆಎಂಎಂ ನೇತೃತ್ವದ ಕಾಂಗ್ರೆಸ್ ಮೈತ್ರಿಕೂಟವೇ ಅಧಿಕಾರದಲ್ಲಿದ್ದರೂ, ರಾಹುಲ್ ಗಾಂಧಿ ಅವರು ತಮ್ಮದೇ ಸರ್ಕಾರದ ಪೊಲೀಸ್ ಕ್ರಮದ ವಿರುದ್ಧ ಧ್ವನಿಯೆತ್ತಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ಯುವಕರ ಧ್ವನಿಯನ್ನು ಹತ್ತಿಕ್ಕುವ ಬದಲು, ಜಾರ್ಖಂಡ್ ಸರ್ಕಾರವು ಅವರೊಂದಿಗೆ ತಕ್ಷಣ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ರಾಹುಲ್ ಒತ್ತಾಯಿಸಿದ್ದಾರೆ.