
ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಮತ್ತು ವಿವಿಧ ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಉತ್ತರ ಪ್ರದೇಶ, ಬಿಹಾರ ಹಾಗೂ ದೆಹಲಿ ಸೇರಿದಂತೆ 17 ರಾಜ್ಯಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನವು 17.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ಋತುವಿನ ಸರಾಸರಿಗಿಂತ 1.3 ಡಿಗ್ರಿ ಕಡಿಮೆ.