
ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 4ರವರೆಗೆ ಜಪಾನ್‌ನಲ್ಲಿ ನಡೆಯಲಿರುವ 20ನೇ ಏಷ್ಯನ್ ಗೇಮ್ಸ್‌ಗಾಗಿ ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ 20 ಸದಸ್ಯರ ಭಾರತೀಯ ಹಾಕಿ ತಂಡವನ್ನು ಪ್ರಕಟಿಸಲಾಗಿದೆ.
ಭಾರತ ತಂಡವು ಪೂಲ್ ಎ ನಲ್ಲಿ ಜಪಾನ್, ಕೊರಿಯಾ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಇಂಡೋನೇಷ್ಯಾ ತಂಡಗಳೊಂದಿಗೆ ಸ್ಥಾನ ಪಡೆದಿದ್ದು, ಸೆಪ್ಟೆಂಬರ್ 20ರಂದು ಇಂಡೋನೇಷ್ಯಾ ವಿರುದ್ಧ ಮೊದಲ ಪಂದ್ಯ ಆಡಲಿದೆ.
ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡವು ಈ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಉಳಿಸಿಕೊಳ್ಳುವ ಜೊತೆಗೆ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆಯುವ ಗುರಿ ಹೊಂದಿದೆ.