
ಬಿಡದಿ ಟೌನ್ಶಿಪ್ ಮತ್ತು ನೈಸ್ ಯೋಜನೆಗಳ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಲೂಟಿ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬಿಡದಿ ರೈತರ ಕೃಷಿ ಭೂಮಿಯನ್ನು ಬೇನಾಮಿ ಕಂಪನಿಗಳ ಮೂಲಕ ಕಬಳಿಸಲು ಯತ್ನಿಸುತ್ತಿರುವ ಡಿ.ಕೆ. ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಯೋಜನೆಗಳ ಅಕ್ರಮಗಳ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ ಎಂದು ಸವಾಲು ಹಾಕಿರುವ ಕುಮಾರಸ್ವಾಮಿ, ಸರ್ಕಾರವು ರಿಯಲ್ ಎಸ್ಟೇಟ್ ದಂಧೆಕೋರರ ಜೊತೆ ಶಾಮೀಲಾಗಿದೆ ಎಂದು ದೂರಿದ್ದಾರೆ.