
ಇರಾನ್ ಬೆಂಬಲಿತ ಹೂಥಿ ಬಂಡುಕೋರರು ಸೌದಿ ಅರೇಬಿಯಾದಲ್ಲಿ ದಾಳಿಯನ್ನು ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ, ರಿಯಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಲ್ಲಿರುವ ಭಾರತೀಯ ನಾಗರಿಕರಿಗೆ ಭಾನುವಾರ ತುರ್ತು ಸುರಕ್ಷತಾ ಸಲಹೆ ನೀಡಿದೆ.
ತುರ್ತು ಸಂದರ್ಭಗಳಲ್ಲಿ ಅಧಿಕಾರಿಗಳ ಸೂಚನೆಯಂತೆ ಹತ್ತಿರದ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಅಪಾಯದ ಸಮಯ ಕಳೆಯುವವರೆಗೂ ತಮ್ಮ ಕಟ್ಟಡ ಅಥವಾ ಕೊಠಡಿಯಲ್ಲೇ ಇರಲು ತಿಳಿಸಲಾಗಿದೆ.
ಇದೇ ತಿಂಗಳು 10ರಂದು ರಿಯಾದ್ ವಿಮಾನ ನಿಲ್ದಾಣದ ಮೇಲೆ ನಡೆದ ಡ್ರೋನ್ ಮತ್ತು ಕ್ಷಿಪಣಿ ದಾಳಿಯಲ್ಲಿ ಒಬ್ಬ ಭಾರತೀಯ ಮೃತಪಟ್ಟು ಹಲವರು ಗಾಯಗೊಂಡಿದ್ದರಿಂದ ಗುಂಪು ಸೇರಬೇಡಿ ಎಂದು ಎಚ್ಚರಿಸಲಾಗಿದೆ.