
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು ನೈಜ ಮತದಾರರನ್ನು ಕೈಬಿಡಲು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ ರೂಪಿಸಿರುವ ಷಡ್ಯಂತ್ರ ಎಂದು ಬಣಕಲ್ ಮಿಲಾದ್ ಟ್ರಸ್ಟ್ ಆರೋಪಿಸಿದೆ.
ಎಸ್ಐಆರ್ ಪ್ರಕ್ರಿಯೆಯಲ್ಲಿ ಮುಸ್ಲಿಮರನ್ನು ಮತಪಟ್ಟಿಯಿಂದ ಕೈಬಿಡಲು ಫಾರಂ 7ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಒತ್ತಾಯಿಸಲಾಗಿದೆ.
ಈ ಸಂಬಂಧ ಬಣಕಲ್ ಮಿಲಾದ್ ಟ್ರಸ್ಟ್ ವತಿಯಿಂದ ತಾಲ್ಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗಿದೆ.