
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದರೂ ಬೆಂಗಳೂರು-ಹೊಸೂರು ಗಡಿಭಾಗದ ಅತ್ತಿಬೆಲೆ ಪಟಾಕಿ ಮಾರುಕಟ್ಟೆಯಲ್ಲಿ ನಿರೀಕ್ಷಿತ ವ್ಯಾಪಾರ ನಡೆದಿಲ್ಲ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಪಟಾಕಿ ಮಾರಾಟದಲ್ಲಿ ಶೇ 30ರಷ್ಟು ಇಳಿಕೆಯಾಗಿದೆ ಎಂದು ವ್ಯಾಪಾರಿಗಳು ಮಾಹಿತಿ ನೀಡಿದ್ದಾರೆ.
ಪರಿಸರ ಮಾಲಿನ್ಯ ತಡೆಗೆ ಕೇವಲ ಹಸಿರು ಪಟಾಕಿಗಳ ಮಾರಾಟಕ್ಕೆ ಅನುಮತಿ ನೀಡಲಾಗಿದ್ದು, ಮಳೆ ಮತ್ತು ಗ್ರಾಹಕರ ಕೊರತೆ ವ್ಯಾಪಾರ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ.