
ಹೈದರಾಬಾದ್‌ನ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಚಾಟ್‌ಜಿಪಿಟಿ (ChatGPT) ಬಳಸಿ ಸೃಷ್ಟಿಸಿದ ನಕಲಿ ವಿಮಾನ ಟಿಕೆಟ್ ತೋರಿಸಿ ಪ್ರಯಾಣಿಸಲು ಯತ್ನಿಸಿದ ವ್ಯಕ್ತಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅಸ್ಲಂ ಎಂಬ ವ್ಯಕ್ತಿ ಗೋವಾಕ್ಕೆ ತೆರಳಲು ನಕಲಿ ಟಿಕೆಟ್ ಬಳಸಿದ್ದು, ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ವಂಚನೆ ಬೆಳಕಿಗೆ ಬಂದಿದೆ.
AI ಟೂಲ್‌ಗಳನ್ನು ಬಳಸಿ ನಕಲಿ ದಾಖಲೆಗಳನ್ನು ಸೃಷ್ಟಿಸುವುದು ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಗಂಭೀರ ಅಪರಾಧವಾಗಿದ್ದು, ಆರೋಪಿಯ ಸ್ನೇಹಿತನ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.