
ಮಹಿಳೆಯರ ಮೆನೋಪಾಸ್ ಸಮಸ್ಯೆಗಳ ನಿರ್ವಹಣೆಗಾಗಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು 'ಋತುತಾರೆ' ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದು, ನಟಿ ರಮ್ಯಾ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಲಾಗಿದೆ.
ಮಹಿಳಾ ತಜ್ಞೆ ಜೋಸ್ನಾ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಮಹಿಳೆಯರ ಆರೋಗ್ಯ ಮಾಹಿತಿ ಸಂಗ್ರಹಿಸಿ ಮೆನೋಪಾಸ್ ಕುರಿತು ಜಾಗೃತಿ ಮೂಡಿಸಲಿದ್ದಾರೆ.
ಮೆನೋಪಾಸ್ ಸಮಯದಲ್ಲಿ ಉಂಟಾಗುವ ಹೃದಯ ಮತ್ತು ಮೂಳೆ ಸಂಬಂಧಿ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಈ ಯೋಜನೆ ಸಹಕಾರಿಯಾಗಲಿದ್ದು, ಗ್ರಾಮೀಣ ಭಾಗದ ಮಹಿಳೆಯರಿಗೂ ಮಾಹಿತಿ ತಲುಪಿಸುವ ಗುರಿ ಹೊಂದಲಾಗಿದೆ.