
ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಕಂಟೆಂಟ್ ಮತ್ತು ಎಐ ಮೂಲಕ ಸೃಷ್ಟಿಯಾಗುವ ಕಂಟೆಂಟ್ ನಿಯಂತ್ರಣದ ಬಗ್ಗೆ ಕೇಂದ್ರ ಸರ್ಕಾರ ಮೆಟಾ ಸಂಸ್ಥೆಯಿಂದ ಸ್ಪಷ್ಟನೆ ಕೇಳಿದೆ.
ಮೆಟಾದ ಪಬ್ಲಿಕ್ ಪಾಲಿಸಿ ವಿಭಾಗದ ಮುಖ್ಯಸ್ಥ ಜೋಯೆಲ್ ಕಪ್ಲಾನ್ ನೇತೃತ್ವದ ತಂಡ ಬುಧವಾರ ಮತ್ತು ಗುರುವಾರ ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಲಿದೆ.
ಪರಿಶೀಲಿತ ಖಾತೆಗಳಿಂದ ಪ್ರಕಟವಾಗುವ ಪೋಸ್ಟ್‌ಗಳನ್ನು ತೆಗೆದುಹಾಕುವ ಸಂದರ್ಭದಲ್ಲಿನ ನಿರ್ಲಕ್ಷ್ಯದ ಬಗ್ಗೆಯೂ ಸರ್ಕಾರ ಕಳವಳ ವ್ಯಕ್ತಪಡಿಸಿದ್ದು, ಕಠಿಣ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದೆ.