
ಭಾರತದ 15 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನವನ್ನು ಪಾಕಿಸ್ತಾನದ ದಂತಕಥೆ ವಾಸಿಂ ಅಕ್ರಮ್ ಕೊಂಡಾಡಿದ್ದಾರೆ.
ಭಾರತದಲ್ಲಿ ವೈಭವ್ ಸೂರ್ಯವಂಶಿಯಂತಹ ಯುವ ಪ್ರತಿಭೆಗಳು ಉದಯಿಸುತ್ತಿದ್ದರೂ, ತಮ್ಮ ದೇಶದಲ್ಲಿ ಕಳೆದ ಕೆಲ ವರ್ಷಗಳಿಂದ ಇಂತಹ ಒಬ್ಬನೇ ಒಬ್ಬ ಆಟಗಾರನನ್ನು ಮುಂಚೂಣಿಗೆ ತರಲು ಸಾಧ್ಯವಾಗಿಲ್ಲ ಎಂದು ಅಕ್ರಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ಆಗಾಗ್ಗೆ ಅಧ್ಯಕ್ಷರ ಬದಲಾವಣೆ ಹಾಗೂ ದೇಶೀಯ ಕ್ರಿಕೆಟ್ ವ್ಯವಸ್ಥೆ ಕುಸಿದಿರುವುದೇ ತಂಡದ ವೈಫಲ್ಯಕ್ಕೆ ಪ್ರಮುಖ ಕಾರಣ ಎಂದು ಅವರು ಆರೋಪಿಸಿದ್ದಾರೆ.