
ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ. ತೀವ್ರ ಮಳೆ ಕೊರತೆಯಿಂದಾಗಿ ಕುಡಿಯುವ ನೀರು, ಕೃಷಿ ಮತ್ತು ಜಲವಿದ್ಯುತ್ ಉತ್ಪಾದನೆಗೆ ಆತಂಕ ಎದುರಾಗಿದೆ.
40 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ನಷ್ಟವಾಗುವ ಅಂದಾಜಿದೆ. ನೈಋತ್ಯ ಮುಂಗಾರಿನ ಮಳೆ ಕೊರತೆಯಿಂದಾಗಿ ರಾಜ್ಯದ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತವಾಗುವ ಸಾಧ್ಯತೆಯಿದೆ.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಘೋಷಿಸಿದ ಪರಿಹಾರ ಮೊತ್ತದ ಶೇ.50ರಷ್ಟನ್ನು ಮಧ್ಯಂತರ ನೆರವಿನ ರೂಪದಲ್ಲಿ ತಕ್ಷಣ ಬಿಡುಗಡೆ ಮಾಡುವಂತೆ ಪ್ರಧಾನಿಗೆ ಮನವಿ ಮಾಡಲಾಗಿದೆ.