
ರಾಯಚೂರು ನಗರದ 60 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಂಜೂರಾದ 50 ಹುದ್ದೆಗಳ ಪೈಕಿ 37 ಹುದ್ದೆಗಳು ಖಾಲಿ ಉಳಿದಿದ್ದು, ಕೇವಲ 13 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು, ಮಕ್ಕಳ ತಜ್ಞರು ಹಾಗೂ ರೇಡಿಯೋಲಾಜಿಸ್ಟ್ ಸೇರಿದಂತೆ ಪ್ರಮುಖ ವೈದ್ಯಕೀಯ ಹುದ್ದೆಗಳು ಭರ್ತಿಯಾಗಿಲ್ಲ.
ಒಟ್ಟು ಮಂಜೂರಾದ ಹುದ್ದೆಗಳಲ್ಲಿ ಶೇ 26ರಷ್ಟು ಮಾತ್ರ ಭರ್ತಿಯಾಗಿದ್ದು, ಶೇ 74ರಷ್ಟು ಹುದ್ದೆಗಳು ಖಾಲಿ ಉಳಿದಿರುವುದರಿಂದ ಆರೋಗ್ಯ ಸೇವೆಗಳ ನಿರ್ವಹಣೆಗೆ ಸವಾಲಾಗಿದೆ.