
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರಿಗೆ ಅಧಿಕೃತ ಕರ್ತವ್ಯದ ನಿರ್ವಹಣೆಯಲ್ಲಿ ನಾಗರಿಕ ಮತ್ತು ಕ್ರಿಮಿನಲ್ ಕಾನೂನು ಕ್ರಮಗಳಿಂದ ಸಂಪೂರ್ಣ ವಿನಾಯಿತಿ ನೀಡುವ 2023ರ ಕಾಯ್ದೆಯ ಸೆಕ್ಷನ್ 16ರ ಸಿಂಧುತ್ವ ಪ್ರಶ್ನಿಸಿರುವ ಅರ್ಜಿಯ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠವು ಈ ಅರ್ಜಿ ವಿಚಾರಣೆ ನಡೆಸಿದ್ದು, ಆಯುಕ್ತರಿಗೆ ಇಂತಹ ಸಾರ್ವತ್ರಿಕ ಹಾಗೂ ಸಂಪೂರ್ಣ ಕಾನೂನು ವಿನಾಯಿತಿ ನೀಡುವುದು ಪ್ರಜಾಪ್ರಭುತ್ವದ ಮೂಲತತ್ತ್ವಕ್ಕೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ಕರಡು ಪಟ್ಟಿಯಿಂದ ಹೆಸರು ಕಳೆದುಕೊಂಡ ತಕ್ಷಣ ಅಥವಾ ಗಡುವು ಮುಗಿದ ತಕ್ಷಣ ಮತದಾರರ ಹಕ್ಕು ಶಾಶ್ವತವಾಗಿ ರದ್ದಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಪೀಠವು, ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 19ಕ್ಕೆ ನಿಗದಿಪಡಿಸಿದೆ.