
ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ಶನಿವಾರ ದಿಢೀರ್ ಏರುಪೇರು ಉಂಟಾಗಿದ್ದು, ಅವರು ಹುಬ್ಬಳ್ಳಿಯ ನಿಗದಿತ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ವೈದ್ಯರ ಸಲಹೆಯಂತೆ ಅವರು ತಂಗಿದ್ದ ಖಾಸಗಿ ಹೋಟೆಲ್ನಲ್ಲಿಯೇ ವೈದ್ಯಕೀಯ ತಂಡದ ನಿಗಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಎರಡು ಗಂಟೆಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ.
ಅವರ ಬದಲಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ರಾಜ್ಯದ ಸಚಿವರು ಮತ್ತು ನಾಯಕರು ಕೆಎಇ ಸಂಸ್ಥೆಯ ನೂತನ ಶೈಕ್ಷಣಿಕ ಕಟ್ಟಡ ಹಾಗೂ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.