
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ಹೊಸ ಮುಖಗಳನ್ನು ಸೇರ್ಪಡೆಗೊಳಿಸುವ ಮೂಲಕ ಇಂದು ಲೋಕಭವನದಲ್ಲಿ 19 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪಿ. ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ಬಿ. ಝಡ್. ಜಮೀರ್ ಅಹಮದ್ ಖಾನ್, ಲಕ್ಷ್ಮಣ ಸವದಿ ಸೇರಿದಂತೆ 19 ಶಾಸಕರಿಗೆ ಪ್ರಮಾಣವಚನ ಬೋಧಿಸಿದರು.
ಸಚಿವ ಸ್ಥಾನ ಕೈತಪ್ಪಿದ ಹಲವು ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲವು ಕಡೆಗಳಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.