
ನಂದಿ ಹಿಲ್ಸ್ನಲ್ಲಿ ನಡೆದ ಮಾನ್ಸೂನ್ ಮ್ಯಾರಥಾನ್ ಓಟದ ವೇಳೆ ಪಂಜಾಬ್ ಮೂಲದ 31 ವರ್ಷದ ಅಮನ್ ದೀಪ್ ಸಿಂಗ್ ಜಗಡೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
21 ಕಿಲೋಮೀಟರ್ ಓಟದ ಭಾಗವಾಗಿದ್ದ ಅಮನ್ ದೀಪ್, ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದ್ದು, ಮೃತದೇಹವನ್ನು ಮುದ್ದೇನಹಳ್ಳಿಯ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಮ್ಯಾರಥಾನ್ನಲ್ಲಿ 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಮೃತ ಅಮನ್ ದೀಪ್ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು.