
ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭರ್ಜರಿ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,31,500 ರೂಪಾಯಿ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 1,43,460 ರೂಪಾಯಿ ಇದೆ.
ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪ್ರತಿ ಕೆ.ಜಿ ಬೆಳ್ಳಿ ಬೆಲೆಯು 5,000 ರೂಪಾಯಿಗಳಷ್ಟು ಕಡಿಮೆಯಾಗಿ 2,05,000 ರೂಪಾಯಿಗೆ ತಲುಪಿದೆ.