
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಕುರಿತು ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಗುರುವಾರ ರಾಹುಲ್ ಗಾಂಧಿ ರಾಜ್ಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಸಿ ವೇಣುಗೋಪಾಲ್ ಮತ್ತು ಸುರ್ಜೆವಾಲ ಭಾಗವಹಿಸಿದ್ದು, ನೂತನ ಸಚಿವರ ಪಟ್ಟಿಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ.
ದೆಹಲಿಯಲ್ಲಿ ನಡೆದ ಸಭೆಯ ಬಳಿಕ ರಾಜ್ಯ ನಾಯಕರು ಬೆಂಗಳೂರಿಗೆ ವಾಪಸಾಗಿದ್ದು, ಸಂಪುಟ ವಿಸ್ತರಣೆಯ ಅಂತಿಮ ನಿರ್ಧಾರದ ಕುರಿತು ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ.