
ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಗೆಲುವು ಸಾಧಿಸಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ 908 ಮತಗಳ ಅಂತರದಿಂದ ಜಯಗಳಿಸಿದ್ದು, ಐದು ಬಾರಿ ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಹಿನ್ನಡೆ ಅನುಭವಿಸಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಈ ಫಲಿತಾಂಶವು ಆಡಳಿತರೂಢ ಕಾಂಗ್ರೆಸ್ ಸರ್ಕಾರದ ದುರಾಳಿತಕ್ಕೆ ಹಿಡಿದ ಕನ್ನಡಿಯಾಗಿದ್ದು ಕೌಂಟ್ ಡೌನ್ ಶುರುವಾಗಿದೆ ಎಂದಿದ್ದಾರೆ.