
ಕೆಪಿಎಸ್‌ಸಿ ನೇಮಕಾತಿ ಅಕ್ರಮ, ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಇಡಿ ದಾಳಿ ಸೇರಿದಂತೆ ಪ್ರಮುಖ ಪ್ರಕರಣಗಳ ಪ್ರಗತಿ ಪರಿಶೀಲನೆಗಾಗಿ ಇಡಿ ನಿರ್ದೇಶಕ ರಾಹುಲ್ ನವೀನ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಅವರು ನವದೆಹಲಿಯಿಂದ ಏರ್ ಇಂಡಿಯಾ ವಿಮಾನದ ಮೂಲಕ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ನಾಳೆಯಿಂದ ಎರಡು ರಾಜ್ಯಗಳ ಪ್ರಕರಣಗಳ ಪ್ರಗತಿ ಪರಿಶೀಲನಾ ಕಾರ್ಯವನ್ನು ಅವರು ನಡೆಸಲಿದ್ದಾರೆ.