ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಚುನಾವಣೆ ಬಹಿಷ್ಕರಿಸುವಂತೆ ಕರೆ ನೀಡಿದ್ದ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 20 ನಾಗರಿಕರು ಸಾವನ್ನಪ್ಪಿದ್ದಾರೆ.
ರಾವಲ್ಕೋಟ್‌ನ ಡ್ರೀಕ್‌ಪ್ರದೇಶದಲ್ಲಿ ನಡೆದ ಈ ಹಿಂಸಾಚಾರದಲ್ಲಿ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಜೂನ್ 5ರಿಂದ ಇಲ್ಲಿಯವರೆಗೆ ಒಟ್ಟು 80 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಚುನಾವಣಾ ಪ್ರಕ್ರಿಯೆಗಾಗಿ ಪಾಕಿಸ್ತಾನ ಸರ್ಕಾರವು ಈ ಪ್ರದೇಶದಲ್ಲಿ 14,000ಕ್ಕೂ ಹೆಚ್ಚು ಸಶಸ್ತ್ರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದು, ಸ್ನೈಪರ್‌ಗಳು ಮತ್ತು ಅಶ್ರುವಾಯು ಶೆಲ್‌ಗಳನ್ನು ಬಳಸಲಾಗುತ್ತಿದೆ.