
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಬಳಿ ಆಗಸ್ಟ್ 31 ರಂದು ಹಳಿ ದಾಟುತ್ತಿದ್ದಾಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಇರ್ಫಾನಾ (46), ಆಂಧ್ರಪ್ರದೇಶದ ಹಿಂದೂಪುರದಿಂದ ರಜೆಗೆ ಬಂದಿದ್ದ ಮೊಮ್ಮಕ್ಕಳಾದ ರುಕಿಯಾ (13) ಮತ್ತು ರಾಕಿಯಾ (8) ಎಂದು ಗುರುತಿಸಲಾಗಿದೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರೈಲ್ವೆ ನಿಲ್ದಾಣದ ಬಳಿ ಸ್ಕೈವಾಕ್ ನಿರ್ಮಿಸುವಂತೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.