
ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ವಿಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆ, ಆಗಸ್ಟ್ 27ರವರೆಗೆ ನಡೆಯಬೇಕಿದ್ದ ಅಧಿವೇಶನವನ್ನು ಆಗಸ್ಟ್ 24ರಂದೇ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ಸಚಿವ ನಾಗೇಂದ್ರ ವಿರುದ್ಧ ದೂರು ಸಲ್ಲಿಸಿದ್ದಾರೆ.
85 ಕೋಟಿ ರೂಪಾಯಿ ಹಗರಣದ ಆರೋಪ ಹೊತ್ತಿರುವ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದಲ್ಲಿ ತೀವ್ರ ಪ್ರತಿಭಟನೆ ನಡೆಸಿದರು.