
ಮೈಕ್ರೋಸಾಫ್ಟ್ ಕಂಪನಿಯಲ್ಲಿ ಇಂಜಿನಿಯರಿಂಗ್ ವಿಭಾಗದ ಉಪಾಧ್ಯಕ್ಷರಾಗಿ 23 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಕೇಶವನ್ ಷಣ್ಮುಗಂ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಭಾರತದಲ್ಲಿರುವ ವಯಸ್ಸಾದ ಪೋಷಕರೊಂದಿಗೆ ಹೆಚ್ಚು ಸಮಯ ಕಳೆಯುವ ಉದ್ದೇಶದಿಂದ ಅವರು ಈ ನಿರ್ಧಾರ ಕೈಗೊಂಡಿರುವುದಾಗಿ ಲಿಂಕ್ಡ್ಇನ್ನಲ್ಲಿ ತಿಳಿಸಿದ್ದಾರೆ.
ಎಕ್ಸೆಲ್ ಕೋಪೈಲಟ್ ಸೇರಿದಂತೆ ಪ್ರಮುಖ ಯೋಜನೆಗಳಲ್ಲಿ ಕೆಲಸ ಮಾಡಿದ್ದ ಅವರ ಈ ಮಾನವೀಯ ನಿರ್ಧಾರಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.