
ಕರ್ನಾಟಕದ ವಿವಿಧ ಭಾಗಗಳಲ್ಲಿ ಅಕ್ಟೋಬರ್ 9ರಿಂದ ಅಕ್ಟೋಬರ್ 13ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರಿ ಮಳೆಯಾಗಲಿದೆ.
ತುಮಕೂರು, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.