
ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು, ಕಳೆದ 3 ದಿನಗಳಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 111 ಅಡಿಯಿಂದ 108 ಅಡಿಗೆ ಇಳಿಕೆಯಾಗಿದೆ.
ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ, ತಮಿಳುನಾಡಿಗೆ ಬಿಡುಗಡೆಯಾಗುತ್ತಿರುವ ಬಹುಪಾಲು ನೀರು ಕೆಆರ್‌ಎಸ್ ಡ್ಯಾಂನಿಂದಲೇ ಹರಿದು ಹೋಗುತ್ತಿದೆ.
ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ, ಹೊರ ಹರಿವು ಹೆಚ್ಚಾಗುತ್ತಿರುವುದರಿಂದ ಜಲಾಶಯದ ನೀರಿನ ಸಂಗ್ರಹ ದಿನೇ ದಿನೇ ಕುಸಿಯುತ್ತಿದೆ.