
ಪುಣೆ ನಗರದಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ನಿಟ್ಟಿನಲ್ಲಿ ಪ್ಲೇ ಸ್ಟೋರ್ ಹಾಗೂ ಆ್ಯಪ್ ಸ್ಟೋರ್ನಿಂದ ಆ್ಯಪ್ ತೆಗೆದುಹಾಕುವಂತೆ ಪುಣೆ ಪೊಲೀಸರು ಪತ್ರ ಬರೆದಿದ್ದಾರೆ.
ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಅವರು ಈ ವಿಚಾರವನ್ನು ಖಚಿತಪಡಿಸಿದ್ದು, ಸಂಸ್ಥೆಯ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ.
ಸಾರ್ವಜನಿಕ ಸಾರಿಗೆ ಕೊರತೆ ಹಾಗೂ ಸುರಕ್ಷತೆಯ ಕಾರಣ ನೀಡಿ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡುವ ಈ ನಡೆಗೆ ಪ್ರಯಾಣಿಕರಿಂದ ಪರ-ವಿರೋಧ ಚರ್ಚೆಗಳು ವ್ಯಕ್ತವಾಗಿವೆ.