Health & Environment
ಕಸ್ತೂರಿ ರಂಗನ್ ವರದಿ ಜಾರಿಯಿಂದ ಜನಸಾಮಾನ್ಯರ ಬದುಕಿಗೆ ಸಂಕಷ್ಟ: ವಿಧಾನ ಪರಿಷತ್‌ನಲ್ಲಿ ಚರ್ಚೆ

ಕಸ್ತೂರಿ ರಂಗನ್ ವರದಿ ಜಾರಿಯಿಂದ ಜನಸಾಮಾನ್ಯರ ಬದುಕಿಗೆ ಸಂಕಷ್ಟ: ವಿಧಾನ ಪರಿಷತ್‌ನಲ್ಲಿ ಚರ್ಚೆ

oneindia55m
THE BRIEF
1

ಕಸ್ತೂರಿ ರಂಗನ್ ವರದಿ ಯಥಾವತ್ತಾಗಿ ಅನುಷ್ಠಾನಗೊಂಡರೆ ಮಲೆನಾಡು, ಕರಾವಳಿ ಹಾಗೂ ಪರಿಸರ ಸೂಕ್ಷ್ಮ ವಲಯದ ಜನರ ಬದುಕಿಗೆ ಮರಣ ಶಾಸನವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರವಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

2

ಚಿಕ್ಕಮಗಳೂರಿನಲ್ಲಿ ಜನಸಂಖ್ಯೆ ಬೆಳವಣಿಗೆ ದರ ಅತೀ ಕಡಿಮೆಯಿದ್ದು, ವರದಿಯಲ್ಲಿ ಕಾಡುಪ್ರಾಣಿಗಳ ಸಂಖ್ಯೆ ವಿಪರೀತ ಹೆಚ್ಚಾಗಿರುವುದರ ಬಗ್ಗೆ ಅಥವಾ ರೈತರಿಗಾಗುತ್ತಿರುವ ಹಾನಿಯ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ ಎಂದು ಅವರು ತಿಳಿಸಿದ್ದಾರೆ.

3

ಪಶ್ಚಿಮ ಘಟ್ಟ ವ್ಯಾಪ್ತಿಯ 6 ರಾಜ್ಯಗಳು ಈಗಾಗಲೇ ಆಕ್ಷೇಪಣೆ ಸಲ್ಲಿಸಿದ್ದು, ನಾವೆಲ್ಲರೂ ಪಕ್ಷಾತೀತವಾಗಿ ಒಗ್ಗೂಡಿ ಕೇಂದ್ರ ಸರ್ಕಾರವನ್ನು ಭೇಟಿ ಮಾಡಿ ಅಗತ್ಯ ಕಾನೂನು ತಿದ್ದುಪಡಿ ತರಬೇಕೆಂದು ಅವರು ಆಗ್ರಹಿಸಿದ್ದಾರೆ.