
ಮಂಡ್ಯದ ಆಸ್ಪತ್ರೆಯ ವಿಶೇಷ ಕೊಠಡಿಯಲ್ಲಿ ಗೆಳತಿಯೊಂದಿಗೆ ರಾಜ್ಯಾತಿಥ್ಯ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ಮಹಮದ್ ಹುಸೇನ್ ಪ್ರಕರಣದಲ್ಲಿ, ಕರ್ತವ್ಯ ಲೋಪಕ್ಕಾಗಿ ಪೇದೆ ಚಂದ್ರು ಅವರನ್ನು ಅಮಾನತುಗೊಳಿಸಲಾಗಿದೆ.
ಜಿಲ್ಲಾ ಸತ್ರ ನ್ಯಾಯಾಧೀಶ ಸಿ. ಚಂದ್ರಶೇಖರ್ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದಾಗ ಈ ಅಕ್ರಮ ಬೆಳಕಿಗೆ ಬಂದಿದ್ದು, ಎಸ್‌ಪಿ ಡಾ. ಶೋಭಾರಾಣಿ ಅವರು ತಕ್ಷಣ ಕ್ರಮ ಕೈಗೊಂಡಿದ್ದಾರೆ.
ಘಟನೆಯ ಗಂಭೀರತೆ ಪರಿಗಣಿಸಿ ಡಿಜಿಪಿ ಅಲೋಕ್ ಕುಮಾರ್ ಅವರು ಡಿಐಜಿ ದಿವ್ಯಾಶ್ರೀ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.