
ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ 33 ವರ್ಷದ ಮಹಿಳೆಯೊಬ್ಬಳ ಹೊಟ್ಟೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿದ್ದರಿಂದ, ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ 14 ಪೆನ್ನುಗಳು, 5 ಮರದ ಚಮಚಗಳು ಹಾಗೂ ಒಂದು ಮೇಣದಬತ್ತಿಯನ್ನು ಹೊರತೆಗೆದಿದ್ದಾರೆ.
ನರಸರಾವ್ ಪೇಟೆಯ ಮಾತಾಶ್ರೀ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಮಹಿಳೆಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕಳೆದ 10 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಹಿಳೆ, ಪತಿ ವಿಚ್ಛೇದನ ನೀಡಿದ ಒತ್ತಡದಲ್ಲಿ ಈ ವಸ್ತುಗಳನ್ನು ನುಂಗಿರಬಹುದು ಎಂದು ಆಕೆಯ ತಂದೆ ನೋಮುಲ ಹನುಮಂತರಾವ್ ತಿಳಿಸಿದ್ದಾರೆ.