
ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಯ ಚರ್ಚೆಯ ವೇಳೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕಳೆದ 12 ವರ್ಷಗಳಲ್ಲಿ 90,000 ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೆಪಿಎಸ್ಸಿ ಹಗರಣ ಮತ್ತು ವೆಟರ್ನರಿ ಕಾಲೇಜಿನ ಸೀಟು ಹಗರಣದ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿಗಳು ಉತ್ತರ ನೀಡಬೇಕೆಂದು ಸೂರ್ಯ ಸದನದಲ್ಲಿ ಆಗ್ರಹಿಸಿದ್ದಾರೆ.