
ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಪೈಕಿ ಬೆಂಗಳೂರು ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಎರಡರಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ಎಂ.ಪಿ. ರಂಗನಾಥ್ ಅವರು ಕಾಂಗ್ರೆಸ್‌ನ ಪುಟ್ಟಣ್ಣ ಅವರನ್ನು ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶಿಲ್ ನಮೋಶಿ ಅವರು ಶರಣಪ್ಪ ಮಟ್ಟೂರು ಅವರನ್ನು ಸೋಲಿಸಿದ್ದಾರೆ.
ಆಗ್ನೇಯ ಪದವೀಧರರ ಕ್ಷೇತ್ರ ಮತ್ತು ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು, ಈ ಎರಡರಲ್ಲೂ ಎನ್‌ಡಿಎ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.