
ಹನುಮ ಜನ್ಮಸ್ಥಳ ಅಂಜನಾದ್ರಿ ದೇಗುಲದ ಆಡಳಿತದ ಅಧಿಕಾರಕ್ಕಾಗಿ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ಹಾಗೂ ಕೊಪ್ಪಳ ಜಿಲ್ಲಾಡಳಿತದ ನಡುವೆ ಸಂಘರ್ಷ ಮುಂದುವರಿದಿದೆ.
ಜಿಲ್ಲಾಡಳಿತ ಅಧಿಕಾರಿಗಳು ದೇಗುಲದ 8 ಕಚೇರಿಗಳಿಗೆ ಬಾಬಾ ಹಾಕಿದ್ದ ಬೀಗವನ್ನು ಒಡೆದು, ಟ್ರಸ್ಟ್‌ನ ಬ್ಯಾನರ್‌ಗಳನ್ನು ತೆರವುಗೊಳಿಸಿ ಸಿಬ್ಬಂದಿಯನ್ನು ಹೊರಹಾಕಿದ್ದಾರೆ.
ಹೈಕೋರ್ಟ್ ತೀರ್ಪಿನ ಆಧಾರದ ಮೇಲೆ ಜಿಲ್ಲಾಡಳಿತವು ಈ ಕಾರ್ಯಾಚರಣೆ ನಡೆಸಿದ್ದು, ಬಾಬಾ ಹಾಗೂ ಅಧಿಕಾರಿಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.