
ಸ್ಯಾಂಡಲ್ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ದೂರಿನ ಮೇರೆಗೆ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಘವೇಂದ್ರ ಎಂಬಾತನನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ರಾಘವೇಂದ್ರ ಯುವತಿಯ ಖಾಸಗಿ ಚಿತ್ರಗಳನ್ನು ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಲ್ಲದೆ, ಟೊಮ್ಯಾಟೊ ಕೆಚಪ್ ಬಳಸಿ ಆತ್ಮಹತ್ಯೆಯ ಸುಳ್ಳು ನಾಟಕವಾಡಿ ಯುವತಿಯನ್ನು ಬೆದರಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್ ಮತ್ತು ಬೆದರಿಕೆ ಹಾಕಿದ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಈ ಹಿಂದೆ ಆತ ಯುವತಿಯ ಕ್ರೆಡಿಟ್ ಕಾರ್ಡ್ ಬಳಸಿ ಸಾಲ ಮಾಡಿದ್ದ ವಿಷಯವೂ ಬೆಳಕಿಗೆ ಬಂದಿದೆ.