
ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರನ್ನು 100 ಕೋಟಿ ರೂ. ಅಕ್ರಮ ವಸೂಲಿ ಪ್ರಕರಣದಲ್ಲಿ ಚೆನ್ನೈ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
2021ರಿಂದ 2026ರ ಅವಧಿಯಲ್ಲಿ 1,000ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಮಾನ್ಯತೆ ನೀಡಲು ಸಚಿವರು ಲಂಚ ವಸೂಲಿ ಮಾಡಿದ್ದಾರೆ ಎಂಬ ಆರೋಪವಿದ್ದು, ಮದ್ರಾಸ್ ಹೈಕೋರ್ಟ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಈ ಪ್ರಕರಣದ ಹಣ ವರ್ಗಾವಣೆ ಜಾಲದ ಬಗ್ಗೆ ಜಾರಿ ನಿರ್ದೇಶನಾಲಯ (ED) ತನಿಖೆ ಆರಂಭಿಸಿದ್ದು, ಮಾಜಿ ಸಚಿವರ ಆಸ್ತಿ ಮತ್ತು ದಾಖಲೆಗಳನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದೆ.