ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ಉದ್ಧವ್ ಠಾಕ್ರೆ ಭಗವಾನ್ ವಿಷ್ಣುವಿನ ಅವತಾರ ಎಂದು ಬಣ್ಣಿಸಿದ್ದಾರೆ.
ಸಿಜೆಪಿ ನೇತೃತ್ವದ ಪ್ರತಿಭಟನೆಗಳು ದೇಶದ ಪ್ರಜಾಪ್ರಭುತ್ವಕ್ಕೆ ಹೊಸ ಚೈತನ್ಯ ನೀಡಿದ್ದು, ಈ ಹೋರಾಟದ ಫಲವಾಗಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತಾಯಿತು ಎಂದು ಠಾಕ್ರೆ ಶ್ಲಾಘಿಸಿದ್ದಾರೆ.
ಬಿಜೆಪಿ ಸರ್ಕಾರವು ಯುವಜನರ ಆಕ್ರೋಶವನ್ನು ನಿರ್ಲಕ್ಷಿಸಬಾರದು ಎಂದು ಎಚ್ಚರಿಸಿದ ಠಾಕ್ರೆ, ದೇಶದ ಯುವಕರು ಆಡಳಿತ ವೈಫಲ್ಯದ ವಿರುದ್ಧ ಪಾಠ ಕಲಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.