
ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಸಂಸ್ಥೆಯು ಹೂಡಿಕೆದಾರರಿಗೆ ತಿಂಗಳಿಗೆ ಶೇ. 3ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ 2,110.97 ಕೋಟಿ ರೂ. ವಂಚನೆ ಮಾಡಿದೆ ಎಂದು ಇಡಿ ಪತ್ತೆಹಚ್ಚಿದೆ.
ಮಂಗಳೂರು ವಲಯದ ಇಡಿ ಅಧಿಕಾರಿಗಳು ಬೆಳಗಾವಿ, ಚಿಕ್ಕೋಡಿ ಮತ್ತು ನಿಪ್ಪಾಣಿಯಲ್ಲಿ ದಾಳಿ ನಡೆಸಿದ್ದು, ಸಂಗ್ರಹಿಸಿದ ಹಣದಲ್ಲಿ ಕೇವಲ 333.89 ಕೋಟಿ ರೂ. ಮಾತ್ರ ಹಿಂತಿರುಗಿಸಿರುವುದು ಬೆಳಕಿಗೆ ಬಂದಿದೆ.
ಆರೋಪಿ ಶಿವಾನಂದ ಸಿದ್ಧಪ್ಪ ನೀಲಣ್ಣವರ ಮತ್ತು ಸಹಚರರು ಅಕ್ರಮವಾಗಿ ಸಂಗ್ರಹಿಸಿದ ಹಣವನ್ನು ಷೇರು ಮಾರುಕಟ್ಟೆ ಹಾಗೂ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ.