
ಕರ್ನಾಟಕದ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಿದೆ.
ರಾಜ್ಯದ ಹಲವೆಡೆ ಗುಡುಗು, ಮಿಂಚು ಹಾಗೂ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಭಾಗದಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಈ ಎಚ್ಚರಿಕೆ ಜಾರಿಯಲ್ಲಿರಲಿದೆ.