
ನಿತೇಶ್ ತಿವಾರಿ ನಿರ್ದೇಶನದ, ರಣಬೀರ್ ಕಪೂರ್ ನಟನೆಯ 'ರಾಮಾಯಣ' ಸಿನಿಮಾ ಚೀನಾದಲ್ಲಿ 'ದಿ ಲೆಜೆಂಡ್ ಆಫ್ ಪ್ರಿನ್ಸ್' ಎಂಬ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ.
ಚಿತ್ರತಂಡವು ಅಕ್ಟೋಬರ್ 1ರಿಂದ ಚೀನಾದ 'ಗೋಲ್ಡನ್ ವೀಕ್' ಸಮಯದಲ್ಲಿ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸೆಪ್ಟೆಂಬರ್ 24ರಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ನಡೆಯಲಿದೆ.
ಈ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ನವೆಂಬರ್ 6ರಂದು ಮತ್ತು ಭಾರತದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 8ರಂದು ತೆರೆಕಾಣಲಿದೆ.