
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತೇಜೋವಧೆ ಖಂಡಿಸಿ ಹಾಗೂ ಬರ ಪರಿಹಾರ ಕೋರಿ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ರಾಜ್ಯ ಸರ್ಕಾರ ಘೋಷಿಸಿರುವ 2,500 ರೂ. ಪರಿಹಾರ ಸಾಲದು ಎಂದು ಹೇಳಿದ ಯತ್ನಾಳ, ರೈತರಿಗೆ ಕನಿಷ್ಠ 25,000 ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಗೆ ವಿಜಯಪುರ ಜಿಲ್ಲೆಯ ಎಲ್ಲ ಎಂಟು ಕ್ಷೇತ್ರಗಳಿಗೂ ಜೆಸಿಬಿ ಅಭ್ಯರ್ಥಿಗಳನ್ನು ಸಿದ್ಧಪಡಿಸಿರುವುದಾಗಿ ಅವರು ಘೋಷಿಸಿದರು.