
ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಒಟ್ಟು 3,991 ಸಿವಿಲ್ ಪೊಲೀಸ್ ಕಾನ್ಸ್‌ಸ್ಟೇಬಲ್ ಹುದ್ದೆಗಳ ದೇಹದಾರ್ಡ್ಯ ಹಾಗೂ ಸಹಿಷ್ಣುತಾ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ವಿವಿಧ ಹಂತಗಳಲ್ಲಿ ಆಯ್ಕೆಯಾಗಿರುವ ಒಟ್ಟು 19,396 ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 28ರಿಂದ ರಾಜ್ಯದ ವಿವಿಧ ವಲಯಗಳ ನಿರ್ದಿಷ್ಟ ಮೈದಾನಗಳಲ್ಲಿ ನಡೆಯುವ ದೈಹಿಕ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಉಳಿಕೆ ಮೂಲ ವೃಂದದ (RPC) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (KK) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.