
ದಿನಕ್ಕೆ 10 ನಿಮಿಷ ಕಾಡಿನಲ್ಲಿ ಹಕ್ಕಿಗಳ ಕೂಗನ್ನು ಆಲಿಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ ಎಂದು ಕೇಂಬ್ರಿಡ್ಜ್ ಯೂನಿವರ್ಸಿಟಿ ಪ್ರೆಸ್‌ನ ಅಧ್ಯಯನ ತಿಳಿಸಿದೆ.
ಉತ್ತರ ಕೆರೊಲಿನಾ ಸ್ಟೇಟ್ ಯೂನಿವರ್ಸಿಟಿಯ 106 ಮಂದಿಯ ಮೇಲೆ ನಡೆಸಿದ ಪ್ರಯೋಗದಲ್ಲಿ, ನೈಸರ್ಗಿಕ ಧ್ವನಿಗಳು ಮಾನಸಿಕ ಆರೋಗ್ಯವನ್ನು ಸುಧಾರಿಸುವುದು ಸಾಬೀತಾಗಿದೆ.
ನಗರ ಪ್ರದೇಶಗಳಲ್ಲಿ ಅರಣ್ಯಗಳನ್ನು ಬೆಳೆಸುವುದರಿಂದ ಜೀವವೈವಿಧ್ಯತೆಯ ಸಂರಕ್ಷಣೆಯ ಜೊತೆಗೆ ಜನರ ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸಲು ಸಾಧ್ಯ ಎಂದು ಸಂಶೋಧಕರು ಹೇಳಿದ್ದಾರೆ.