
ಉತ್ತರ ಅಂಡಮಾನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಮೇಲಿದ್ದ ವಾಯುಭಾರ ಕುಸಿತವು ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುತ್ತಿದೆ.
ಈ ವಾಯುಭಾರ ಕುಸಿತವು ಸೆಪ್ಟೆಂಬರ್ 22ರಂದು ತೀವ್ರ ವಾಯುಭಾರ ಕುಸಿತವಾಗಿ ಬಲಗೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಇದರ ಪ್ರಭಾವದಿಂದ ಸೆಪ್ಟೆಂಬರ್ 23ರವರೆಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.