
ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿ ಅವರ ದಿವಂಗತ ತಂದೆಯನ್ನು ಉಲ್ಲೇಖಿಸಿ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಖರ್ಗೆ ಅವರ ಈ ಹೇಳಿಕೆಗೆ ಆಡಳಿತಾರೂಢ ಬಿಜೆಪಿ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ತನ್ನ ಎಲ್ಲಾ ಮಿತಿಗಳನ್ನು ಮೀರಿದೆ ಎಂದು ತಿರುಗೇಟು ನೀಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹರಿಹಾಯ್ದು ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.